ಮಡಿಕೇರಿ, ಏ. 6: ಕೊಡಗು ಜಿಲ್ಲೆಯಲ್ಲಿ ವಿದೇಶ ಪ್ರವಾಸ ಹಿನ್ನೆಲೆ ಇರುವವರನ್ನು ಪತ್ತೆ ಹಚ್ಚಿದ್ದ ಪ್ರಕರಣಗಳ ಪೈಕಿ ಗೃಹ ಸಂಪರ್ಕ ತಡೆಯಲ್ಲಿದ್ದ ಎಲ್ಲರೂ 14 ದಿನಗಳ ಸಂಪರ್ಕ ತಡೆ ಅವಧಿಯನ್ನು ಪೂರೈಸಿದ್ದಾರೆ.

ಪ್ರಕರಣಗಳ ವಿವರ : ಸೋಂಕು ದೃಢಪಟ್ಟ ಪ್ರಕರಣದ ಪ್ರಾಥಮಿಕ ಸಂಪರ್ಕಗಳು- 4. ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಜನರು-1496

ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಇತರೆ ರಾಜ್ಯಗಳ ಜನರು-38

ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-1538

ಪರೀಕ್ಷಾ ವರದಿ : ಇಲ್ಲಿಯವರೆಗೆ ಒಟ್ಟು 78 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಅದರಲ್ಲಿ 1 ಪ್ರಕರಣ ದೃಢಪಟ್ಟಿದ್ದು, 71 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 6 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟ 1 ಪ್ರಕರಣ ಮತ್ತು 16 ಸೋಂಕು ಶಂಕಿತ ಪ್ರಕರಣಗಳು ಸೇರಿದಂತೆ ಒಟ್ಟು 17 ಪ್ರಕರಣಗಳನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿಟ್ಟು ಉಪಚರಿಸಲಾಗುತ್ತಿದೆ.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀನದ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಪ್ರತ್ಯೇಕ ಕೋವಿಡ್ ಕೇರ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ. ಮಡಿಕೇರಿಯ ಅಶ್ವಿನಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಕೋವಿಡ್ ಯೇತರ ಸೇವೆಗಳನ್ನು ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ. ಅದರಂತೆ ಇಂದಿನಿಂದ ಅಶ್ವಿನಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ಮತ್ತು ಔಷಧಿಗಳನ್ನು ನೀಡಲಾಗುತ್ತಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀನದಲ್ಲಿದ್ದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯು ಈ ಹಿಂದಿನಂತೆ ಈಗಿರುವ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.