ಸಿದ್ದಾಪುರ, ಏ.5: ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಚೀಟಿ ಇಲ್ಲದ ಹಾಗೂ ಬಾಡಿಗೆ ಮನೆಯಲ್ಲಿ ವಾಸಮಾಡಿಕೊಂಡಿರುವ ಅತೀ ಕಡು ಬಡವರನ್ನು ಗುರುತಿಸಿ ಅವರುಗಳಿಗೆ ಪಂಚಾಯಿತಿ ವತಿಯಿಂದ ಅಗತ್ಯ ವಸ್ತುಗಳ ಕಿಟ್ ಗಳನ್ನು ವಿತರಿಸಲಾಯಿತು ಈ ಸಂದರ್ಭ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನೀಲ್ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಅಪ್ಸಲ್, ಸಾಬು ವರ್ಗಿಸ್, ಹನೀಫ ಇನ್ನಿತರರು ಹಾಜರಿದ್ದರು.