ಸುಂಟಿಕೊಪ್ಪ,ಏ.5: ಜಿಲ್ಲಾ ಪತ್ರಿಕಾ ಭವನ ಟ್ರಸ್ಟ್ ಮಡಿಕೇರಿ ಇವರ ವತಿಯಿಂದ ಸುಂಟಿಕೊಪ್ಪ ಹೋಬಳಿ ಪತ್ರಕರ್ತರಿಗೆ ದಿನಸಿ ಆಹಾರ ಸಾಮಗ್ರಿಗಳ ಕಿಟ್ ಹಾಗೂ ಮಾಸ್ಕ್ಗಳನ್ನು ವಿತರಿಸಲಾಯಿತು. ಕೊರೊನಾ ಭೀತಿಯ ನಡುವೆಯೂ ಗ್ರಾಮೀಣ ಪ್ರದೇಶದ ಪತ್ರಕರ್ತರು ಸುದ್ದಿಗಳನ್ನು ನಿರಂತರವಾಗಿ ಸಂಗ್ರಹಿಸಿ ಪ್ರಚಾರ ಮಾಡುತ್ತಿರುವುದನ್ನು ಗಮನಿಸಿ ಅವರಿಗೆ ಬೇಕಾದ ಸಾಮಗ್ರಿಗಳನ್ನು ವಿತರಿಸಿದರು.
ನಂತರ ಮಾತನಾಡಿದ ಟ್ರಸ್ಟ್ನ ಅಧ್ಯಕ್ಷ ಮನು ಶೆಣೈ. ಪತ್ರಕರ್ತರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾನಿಧಿ, ಮತ್ತು ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ನಿಧಿಯನ್ನು ಆರಂಭಿಸಲಾಗಿದೆ. ಅದರ ಸದುಪಯೋಗವನ್ನು ಪಡೆದು ಕೊಳ್ಳುವಂತೆ ಮನವಿ ಮಾಡಿಕೊಂಡರು. ಟ್ರಸ್ಟ್ನ ಕೇಶವ ಕಾಮತ್, ತಿಮ್ಮಪ್ಪ, ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಬಿ.ಡಿ.ರಾಜು ರೈ, ಸುಂಟಿಕೊಪ್ಪ ಹೋಬಳಿ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಬಿ.ವಿನ್ಸೆಂಟ್, ಪತ್ರಕರ್ತರು ಇದ್ದರು.