ಮಡಿಕೇರಿ, ಏ. 5: ಮಡಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ವತಿಯಿಂದ ತಾ. 8 ರಿಂದ 11 ರವರೆಗೆ ನಡೆಸಲು ಉದ್ದೇಶಿಸಲಾಗಿದ್ದ ಶ್ರೀ ಮುತ್ತಪ್ಪ ಜಾತ್ರೆಯನ್ನು ಕೊರೊನಾ ವೈರಸ್ ಹರಡುವ ಭೀತಿಯಿಂದ ಜಿಲ್ಲಾಡಳಿತದ ಕೋರಿಕೆ ಮೇರೆಗೆ ಮುಂದೂಡಲಾಗಿದೆ ಎಂದು ಶ್ರೀ ಮುತ್ತಪ್ಪ ದೇವಾಲಯದ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಮುತ್ತಪ್ಪ ತಿಳಿಸಿದ್ದಾರೆ.