ಕೂಡಿಗೆ, ಏ. 7: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಮುಂಜಾಗೃತಾ ಸಭೆಯು ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಅಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಮುಖ್ಯ ಶಿಕ್ಷಕರು, ನೀರು ಗಂಟಿಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯೆ ಶಿಲ್ಪಾ ಮಂಜುನಾಥ, ಅಭಿವೃದ್ಧಿ ಅಧಿಕಾರಿ ಅಯಿಷಾ ಇದ್ದರು.