ಪೆರಾಜೆ, ಏ. 6: ಜ್ಯೋತಿ ಪ್ರೌಢಶಾಲೆ ಪೆರಾಜೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮನೆಗಳಿಗೆ ಅಕ್ಕಿ ಮತ್ತು ಬೇಳೆಕಾಳುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ದೊಡ್ಡಡ್ಕ ಬರಮೇಲು, ಶಿಕ್ಷಕ ವೇಣುಗೋಪಾಲ್ ಕೊಯೈಂಗಜೆ, ಶಾಲಾ ಸಿಬ್ಬಂದಿ ಅನಿಲ್ ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.