ಕೂಡಿಗೆ, ಏ. 7: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್ ಆಗಿರುವ ಸಂದರ್ಭ ಅನವಶ್ಯಕವಾಗಿ ಓಡಾಡುತ್ತಿದ್ದ 80ಕ್ಕೂ ಹೆಚ್ಚು ಬೈಕ್‍ಗಳು ಮತ್ತು ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಶಾಲನಗರ, ಶಿರಂಗಾಲ, ಹೆಬ್ಬಾಲೆ, ಕೂಡಿಗೆ ಭಾಗಗಳಲ್ಲಿ ವಶಪಡಿಸಿಕೊಳ್ಳಲಾಗಿದೆ.

ಈ ಸಂದರ್ಭ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ಮತ್ತು ಸಂಚಾರಿ ಠಾಣಾಧಿಕಾರಿ ಅಚ್ಚಮ್ಮ ಸೇರಿದಂತೆ ಸಿಬ್ಬಂದಿ ಇದ್ದರು.