ಮಡಿಕೇರಿ, ಏ. 7: ಕೊಡಗಿನಲ್ಲಿ ಸದ್ಯಕ್ಕೆ ಕೊರೊನಾ ಸೋಂಕಿನ ಸಂಖ್ಯೆ ಶೂನ್ಯಗೊಂಡಿದೆ. ಒಂದು ಪಾಸಿಟಿವ್ ಇದ್ದುದೂ ನೆಗೆಟಿವ್ ಆಗಿದೆ. ಈ ಸಂದರ್ಭ ಅವಿರತ ಶ್ರಮಿಸಿದ ವೈದ್ಯ ವೃಂದ ಹಾಗೂ ವೈದ್ಯಕೀಯ ಸಿಬ್ಬಂದಿಯ ಸೇವೆ ಮಹತ್ತರವಾದುದು. ಜಿಲ್ಲಾಡಳಿತದÀ ಸಕಾಲಿಕ ಕ್ರಮವೂ ಶ್ಲಾಘನೀಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.

ಇಂದು ವಿಶ್ವ ಆರೋಗ್ಯ ದಿನದÀ ಸಂದರ್ಭ ವೈದ್ಯ ವೃಂದವನ್ನು ಸನ್ಮಾನಿಸಿ ಗೌರವಿಸಲು ಈ ಕಿರು ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ ಎಂದರು. ಎಷ್ಟೇ ಹಣವಿದ್ದರೂ ಆರೋಗ್ಯವಿಲ್ಲದಿದ್ದರೆ ಏನೂ ಪ್ರಯೋಜನವಿಲ್ಲ. ಎಲ್ಲರ ಆರೋಗ್ಯ ಕಾಪಾಡಲು ವೈದ್ಯರುಗಳು ತಮ್ಮ ಜೀವವನ್ನೇ ಒತ್ತೆಯಿಟ್ಟು ಕೆಲಸ ಮಾಡುತ್ತಿದ್ದಾರೆ. ಅವರ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಕೆಲಸ ಮಾಡುವದು ನಮ್ಮ ಕರ್ತವ್ಯ ಎಂದು ಅವರು ತಿಳಿಸಿದರು. ನಮ್ಮ ದೇಶವನ್ನು ಉಳಿಸಲು ಸೈನಿಕರ ಮೊರೆ ಹೋಗುತ್ತೇವೆ. ಹಾಗೆಯೇ ದೇಶದ ಒಳಗಿನ ಜನರ ಆರೋಗ್ಯವನ್ನು ಉಳಿಸಲು ವೈದ್ಯರ ಮೊರೆ ಹೋಗುತ್ತೇವೆ.

(ಮೊದಲ ಪುಟದಿಂದ) ಪ್ರತಿಯೊಬ್ಬರೂ ಆರೋಗ್ಯವಾಗಿದ್ದರೆ. ಏನು ಬೇಕಾದರು ಸಾಧನೆ ಮಾಡಬಹುದಾಗಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನದ ಪ್ರಯುಕ್ತ ಮಂಗಳವಾರ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿ ಅವರು ಮಾತನಾಡಿದರು.

ಜನರ ಆರೋಗ್ಯವನ್ನು ಕಾಪಾಡಲು ವೈದ್ಯಕೀಯ ಸಿಬ್ಬಂದಿಗಳು ಹಗಲಿರುಳೂ ದುಡಿಯುತ್ತಾರೆ. ಅವರ ಕಾರ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಿಬ್ಬಂದಿಗಳ ಸೇವೆಯನ್ನು ಗುರುತಿಸುವ ಕಾರ್ಯ ಮಾಡಬೇಕು. ಇತ್ತೀಚೆಗೆ ವಿಶ್ವಾದ್ಯಂತ ಕೋವಿಡ್-19 ವೇಗವಾಗಿ ಹರಡುತ್ತಿದ್ದು ಜಿಲ್ಲೆಯಲ್ಲಿ ಜಿಲ್ಲಾಡಳಿತ ಮತ್ತು ವೈದ್ಯಕೀಯ ಸಿಬ್ಬಂದಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿರುವುದರಿಂದ ಕೋವಿಡ್-19 ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ ಸುನೀಲ್ ಸುಬ್ರಮಣಿ ಮಾತನಾಡಿ, ಜಿಲ್ಲಾಡಳಿತ, ಪೊಲೀಸ್, ವೈದ್ಯಕೀಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿ ಸುತ್ತಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣದಲ್ಲಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಕೊಡಗು ವೈದ್ಯಕೀಯ ಕಾಲೇಜಿನ ಡೀನ್ ಡಾ. ಕಾರ್ಯಪ್ಪ, ಅಧೀಕ್ಷಕರಾದ ಡಾ. ಲೋಕೇಶ್, ಡಾ. ಅಜೀಜ್, ಡಾ. ಮಂಜುನಾಥ್, ಮೇರಿ ನಾಣಯ್ಯ, ಅನಿತಾ ಪೂವಯ್ಯ ಇತರರು ಇದ್ದರು.