ಸೋಮವಾರಪೇಟೆ, ಮಾ.8: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ತಡೆಗೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ನ್ಯಾಯಾಧೀಶರುಗಳು ಮಾಹಿತಿ ಸಂಗ್ರಹಿಸಿದರು.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದಂತೆ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಇವರ ವತಿಯಿಂದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಸ್.ಅರ್.ದಿಂಡಲಕೊಪ್ಪ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಪ್ರತಿಭಾ ಅವರುಗಳು ಪಟ್ಟಣ ಪಂಚಾಯಿತಿ ಕಚೇರಿಗೆ ತೆರಳಿ ಕೊರೊನಾ ರೋಗ ಬಾರದಂತೆ ತಡೆಗಟ್ಟಲು ಕಚೇರಿಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಮೇಶ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭ ಪೌರ ಕಾರ್ಮಿಕರ ಸುರಕ್ಷತೆ ಹಾಗೂ ಅವರ ಸಮಸ್ಯೆಗಳನ್ನು ಆಲಿಸಿದರು. ತದ ನಂತರ ಸೋಮವಾರಪೇಟೆ ತಾಲೂಕು ಸರ್ಕಾರಿ ಆರೋಗ್ಯ ಕೇಂದ್ರ, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಶನಿವಾರಸಂತೆ ಆರೋಗ್ಯ ಕೇಂದ್ರ, ಕೊಡ್ಲಿಪೇಟೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಕೊರೊನಾ ಸುರಕ್ಷತೆಗಾಗಿ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವ್ಯೆದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

(ಮೊದಲ ಪುಟದಿಂದ) ಸೋಮವಾರಪೇಟೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ಕೊರೊನಾ ಸೋಂಕಿತರಿಗಾಗಿಯೇ ವಿಶೇಷ ವಾರ್ಡ್ ಒಂದನ್ನು ತೆರೆದಿರುವ ಬಗ್ಗೆ ವೈದ್ಯಾಧಿಕಾರಿಗಳಾದ ಶಿವಪ್ರಸಾದ್ ಮಾಹಿತಿ ನೀಡಿದರು. ವೈದ್ಯಾಧಿಕಾರಿಗಳಾದ ಇಂದೂಧರ್, ತನುಶ್ರೀ, ಅನುಶ್ರೀ ಥಾಮಸ್, ನ್ಯಾಯಾಲಯದ ಸಿಬ್ಬಂದಿ ಬಿ.ಎಸ್. ಮಧು, ಪೆÇಲೀಸ್ ಸಿಬ್ಬಂದಿ ರಮೇಶ್ ಸೇರಿದಂತೆ ಇತರರು ಹಾಜರಿದ್ದರು.

* ಕುಶಾಲನಗರ ನ್ಯಾಯಾಲಯದ ನ್ಯಾಯಾಧೀಶರಾದ ಸಂದೀಪ್ ರೆಡ್ಡಿ ಮತ್ತು ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಅವರು ಕುಶಾಲನಗರದ ಪಟ್ಟಣ ಪಂಚಾಯತಿಗೆ ಭೇಟಿ ನೀಡಿ ಪೌರ ಕಾರ್ಮಿಕರ ಸವಲತ್ತುಗಳ ಬಗ್ಗೆ ಕೊರೊನಾ ಸಂಬಂಧ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ನಂತರ ಶಿರಂಗಾಲ ಮತ್ತು ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಭೇಟಿ ನೀಡಿದರು.

ಈ ಸಂದರ್ಭ ಶಿರಂಗಾಲ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹರೀಶ್, ಹೆಬ್ಬಾಲೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಕೇಶ್, ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುಜಯ್ ಕುಮಾರ್ ಹಾಗೂ ಇತರರು ಇದ್ದರು.