ಕೂಡಿಗೆ, ಏ. 9: ಜಿ.ಪಂ. ಉಪ ಕಾರ್ಯದರ್ಶಿ ಭೀಮಸೇನಗುಡೂರು ಕೂಡುಮಂಗಳೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಅವರು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದರು ನಂತರ ಲಾಕ್ಡೌನ್ಗೆ ಸಂಬಂಧಿಸಿದಂತೆ ಗ್ರಾಮ ಮಟ್ಟದಲ್ಲಿ ಕೈಗೊಳ್ಳುವ ವಿಷಯಗಳನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾಅವರಿಗೆ ತಿಳುವಳಿಕೆ ನೀಡಿದರು. ಶುಚಿತ್ವ ಮತ್ತು ಟಾಸ್ಕ್ ಫೋರ್ಸ್ ಸಮಿತಿಯ ರಚನೆ ನಿರ್ವಹಿಸುವ ವಿಷಯಗಳ ಬಗ್ಗೆ ಸಮರ್ಪಕ ಮಾಹಿತಿಗಳನ್ನು ಅಧಿಕಾರಿ ನೀಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ರವಿ ಇದ್ದರು.