ಮಡಿಕೇರಿ, ಏ. 9: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಗೋಪಾಲಯ್ಯ ಅವರನ್ನು ಸರಕಾರ ನೇಮಕ ಮಾಡಿರುವುದಾಗಿ ತಿಳಿದು ಬಂದಿದೆ. ಆದರೆ ರಾತ್ರಿವರೆಗೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಂದಿಲ್ಲ. ಪ್ರಸ್ತುತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ. ಸೋಮಣ್ಣ ಅವರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ತಾ. 10ರಂದು (ಇಂದು) ಸೋಮಣ್ಣ ಅವರು ಜಿಲ್ಲೆಗೆ ಭೇಟಿ ನೀಡುವ ಕಾರ್ಯಕ್ರಮ ಕೂಡ ಹಮ್ಮಿಕೊಂಡಿದ್ದಾರೆ.