ಕೂಡಿಗೆ, ಏ. 9: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಡೆ ತಂಡ (ಟಾಸ್ಕ್ಫೋರ್ಸ್)ವನ್ನು ರಚನೆ ಮಾಡಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊರೊನಾ ಸಂಬಂಧ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೆ.ಟಿ. ಗಿರೀಶ್ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರವಿ. ಕೃಷ್ಣ, ರಾಮಚಂದ್ರ. ಹೆಚ್.ಎಸ್. ರವಿ, ಮಂಜಯ್ಯ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.