ನಾಪೆÇೀಕ್ಲು, ಏ. 9: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ವೈದ್ಯರು, ಹಿರಿಯ ಮಹಿಳಾ ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಜನರು ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಬಲ್ಲಮಾವಟಿ, ನೆಲಜಿ, ಪೇರೂರು, ಕೀಯಲ್ಕೇರಿ ಮತ್ತಿತರ ಭಾಗಗಳಲ್ಲಿ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿದರು. ಕೀಯಲ್ ಕೇರಿಯ ಪಂದೇಟ್ ಕಾಲೋನಿಯಲ್ಲಿ ಹೊರ ಜಿಲ್ಲೆಯಿಂದ ಬಂದು ತಂಗಿದ್ದವರ ತಪಾಸಣೆಯನ್ನು ನಡೆಸಲಾಯಿತು.