ಕೂಡಿಗೆ, ಏ.9: ಕುಶಾಲನಗರ ಹೋಬಳಿ ವ್ಯಾಪ್ತಿಯ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ನೇಮಕಗೊಂಡಿರುವ ಕುಶಾಲನಗರ ಹೋಬಳಿ ನೋಡಲ್ ಅಧಿಕಾರಿಗಳ ತಂಡ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕುಶಾಲನಗರ ಹೋಬಳಿ ವ್ಯಾಪ್ತಿಯಲ್ಲಿರುವ ಅನೇಕ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದ ತಂಡ. ಅಂಗಡಿಗಳಲ್ಲಿ ಪಡಿತರ ವಸ್ತುಗಳು ಸಮರ್ಪಕವಾಗಿ ವಿತರಣೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆಯಿತು.
ನೋಡಲ್ ಅಧಿಕಾರಿಗಳ ತಂಡ ಶಿರಂಗಾಲ ತೂರೆನೂರು ಕೂಡಿಗೆ ಚಿಕ್ಕ ಅಳುವಾರ. ಸೇರಿದಂತೆ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿತು.
ತಂಡದಲ್ಲಿ ತಾಲೂಕು ಸರ್ವೆ ಇಲಾಖೆಯ ಅಧಿಕಾರಿ ವಿರೂಪಾಕ್ಷ ಕುಶಾಲನಗರ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ಮದುಕುಮಾರ್ ಗ್ರಾಮ ಲೆಕ್ಕಾಧಿಕಾರಿಗಳಾದ ಸಚಿನ್, ಸಂತೋಷ್, ಗೌತಮ್ಮ, ಗುರುದರ್ಶನ ಸೇರಿದಂತೆ ಸಿಬ್ಬಂದಿ ವರ್ಗ ಇದ್ದರು.