ಮಡಿಕೇರಿ, ಏ. 9: ಉಚ್ಚ ನ್ಯಾಯಾಲಯದ ನಿರ್ದೇಶನದ ಮೇರೆಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಿ.ವಿ. ಮಲ್ಲಾಪುರ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ನೂರುನ್ನಿಸ ಅವರುಗಳು ಜಿಲ್ಲಾ ಆಸ್ಪತ್ರೆ ಹಾಗೂ ಅಶ್ವಿನಿ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಸಾಂಕ್ರಾಮಿಕ ರೋಗದ ಬಗ್ಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಹಾಗೂ ವೈದ್ಯರು, ದಾದಿಯರು, ಇತರ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆ ಬಗ್ಗೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಸಂಗ್ರಹಿಸಿದರು. ಈ ಸಂದರ್ಭ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯಸ್ಥರಾದ ಡಾ.ಕಾರ್ಯಪ್ಪ, ಇತರ ವೈದ್ಯಾಧಿಕಾರಿಗಳು ಹಾಜರಿದ್ದರು.