ಸೋಮವಾರಪೇಟೆ, ಏ.9: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ನೂರಾರು ವರ್ಷಗಳಿಂದ ಅನೂಚಾನವಾಗಿ ನಡೆದುಕೊಂಡು ಬಂದಿದ್ದ ಸಂಭ್ರಮದ ಶ್ರೀ ಸಬ್ಬಮ್ಮ ದೇವಿ ಸುಗ್ಗಿ ಉತ್ಸವವನ್ನು ಪ್ರಸಕ್ತ ವರ್ಷ ರದ್ದುಗೊಳಿಸಲಾಗಿದೆ ಎಂದು ಉತ್ಸವ ಸಮಿತಿಯ ಅಧ್ಯಕ್ಷ ರಾಜಗೋಪಾಲ್ ತಿಳಿಸಿದ್ದಾರೆ. ಕಳೆದ ನೂರಾರು ವರ್ಷಗಳಿಂದ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾಧಿಗಳು ಸೇರಿ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದ್ದ ಸುಗ್ಗಿಯನ್ನು ಪ್ರಸಕ್ತ ವರ್ಷ ಕೊರೊನಾ ವೈರಸ್ ಸೋಂಕು ಹಿನ್ನೆಲೆ ನಡೆಸದೇ ಇರಲು ತೀರ್ಮಾನಿಸಲಾಗಿದೆ. ಈ ಹಿಂದೆ ತಾ. 30ರಂದು ಉತ್ಸವ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ಉತ್ಸವವನ್ನು ರದ್ದುಗೊಳಿಸಿರುವದರಿಂದ ಅಂದು ಯಾವದೇ ಭಕ್ತರಿಗೂ ದೇವಿಯ ದರ್ಶನ ಇರುವದಿಲ್ಲ ಎಂದು ರಾಜಗೋಪಾಲ್ ತಿಳಿಸಿದ್ದಾರೆ.