ಸಿದ್ದಾಪುರ, ಏ. 11: ಲಾಕ್ ಡೌನ್ ಹಿನ್ನೆಲೆಯಲ್ಲಿ ಅನಗತ್ಯವಾಗಿ ಸುತ್ತಾಡುತ್ತಿದ್ದ ವಾಹನ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಸಿದ್ದಾಪುರ ಪೊಲೀಸರು ಬಿಸಿ ಮುಟ್ಟಿಸಿದರು. ಮಡಿಕೇರಿ ವಿಭಾಗದ ಡಿ.ವೈ.ಎಸ್.ಪಿ. ಬಾರಿಕೆ ದಿನೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ಸಿದ್ದಾಪುರ ಠಾಣಾಧಿಕಾರಿ ಬೋಜಪ್ಪ ಅವರ ನೇತೃತ್ವದಲ್ಲಿ ಸಿದ್ದಾಪುರ ಪೊಲೀಸರು ಪಟ್ಟಣ ಹಾಗೂ ನೆಲ್ಲಿಹುದಿಕೇರಿಯಲ್ಲಿ ಅನಗತ್ಯವಾಗಿ ಸುತ್ತಾಡುತ್ತಿದ್ದ ವಾಹನ ಚಾಲಕರಿಗೆ ಲಾಠಿ ಹಿಡಿದು ಖಡಕ್ ಎಚ್ಚರಿಕೆ ನೀಡಿದರು. ಕೆಲವರಿಗೆ ಲಾಠಿ ರುಚಿಯನ್ನೂ ತೋರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಸುತ್ತಾಡುತ್ತಿರುವವರಿಗೆ ಭಯ ಎದುರಾಗಿದೆ