ಕುಶಾಲನಗರ, ಏ. 11: ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟು ಮತ್ತೊಬ್ಬ ಗಂಭೀರ ವಾಗಿ ಗಾಯ ಗೊಂಡ ಘಟನೆ ಶನಿವಾರ ನಂಜರಾ ಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಪಂ ವ್ಯಾಪ್ತಿಯ ಕಬ್ಬಿನ ಗದ್ದೆ ಗ್ರಾಮದ ಚನ್ನಪ್ಪ ಎಂಬವರ ಪುತ್ರ ಎಂ.ಸಿ.ಲೋಕೇಶ್ (35) ಮೃತ ದುರ್ದೈವಿ. ಅದೇ ಗ್ರಾಮದ ಮುತ್ತ (60) ಎಂಬಾತ ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ರವಾನಿಸಲಾಗಿದೆ.ಗ್ರಾಮದ ಸಮೀಪದ ಆನೆಕಾಡು ಮೀಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಲೋಕೇಶ್‍ನನ್ನು ಕುಶಾಲನಗರ, ಏ. 11: ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟು ಮತ್ತೊಬ್ಬ ಗಂಭೀರ ವಾಗಿ ಗಾಯ ಗೊಂಡ ಘಟನೆ ಶನಿವಾರ ನಂಜರಾ ಯಪಟ್ಟಣ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಗ್ರಾಪಂ ವ್ಯಾಪ್ತಿಯ ಕಬ್ಬಿನ ಗದ್ದೆ ಗ್ರಾಮದ ಚನ್ನಪ್ಪ ಎಂಬವರ ಪುತ್ರ ಎಂ.ಸಿ.ಲೋಕೇಶ್ (35) ಮೃತ ದುರ್ದೈವಿ. ಅದೇ ಗ್ರಾಮದ ಮುತ್ತ (60) ಎಂಬಾತ ಗಂಭೀರವಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ರವಾನಿಸಲಾಗಿದೆ.ಗ್ರಾಮದ ಸಮೀಪದ ಆನೆಕಾಡು ಮೀಸಲು ಅರಣ್ಯ ಪ್ರದೇಶಕ್ಕೆ ತೆರಳಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಲೋಕೇಶ್‍ನನ್ನು ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ಅನನ್ಯ ಕುಮಾರ್ ಭೇಟಿ ನೀಡಿದ್ದಾರೆ. ಮೃತರ ಮರಣೋತ್ತರ ಪರೀಕ್ಷೆ ನಂತರ ಇಲಾಖೆಯು ಪರಿಹಾರ ಶಿಫಾರಸು ಮಾಡಬಹುದೆಂಬುದು ತಿಳಿದುಬಂದಿದೆ.