ಕೂಡಿಗೆ, ಏ. 11: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕೇಂದ್ರದ ಸಮಸ್ಯೆಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪುನರ್ವಸತಿ ಕೇಂದ್ರದಲ್ಲಿ ಅಲ್ಲಿನ ಮನೆ ನಿರ್ಮಾಣ ಕಸ ವಿಲೇವಾರಿ ಘಟಕದ ಸಮಸ್ಯೆ, ವಿದ್ಯುತ್ ಅಧಿಕ ಬಿಲ್ಗಳು ಬಂದಿರುವ ಬಗ್ಗೆ ಅಲ್ಲದೆ ಇತರೆ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ಅಲ್ಲಿನ ಗ್ರಾಮಸ್ಥರು ತಂದರು. ಬಾಕಿ ಇರುವ ಕೆಲ ಮನೆ ನಿರ್ಮಾಣದ ಕಾಮಗಾರಿಯನ್ನು ಈ ಸಂದರ್ಭ ಅವರು ವೀಕ್ಷಣೆ ಮಾಡಿದರು.
ನಂತರ ಮಾತನಾಡಿದ ಶಾಸಕರು ಸರಕಾರ ದಿಡ್ಡಳ್ಳಿಯಿಂದ ಬಂದ ಎಲ್ಲಾ 554 ಕುಟುಂಬಗಳಿಗೆ ಉತ್ತಮವಾದ ಮನೆ, ಮನೆಗೆ ಬೇಕಾಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತದೆ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ತಿಂಗಳಲ್ಲಿ ಪೌಷ್ಟಿಕ ಆಹಾರ ವಿತರಣೆ ನಡೆಯುತಿದೆ ಇದನ್ನು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಅರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎಂದರು. ಕೊರೊನಾ ವೈರಸ್ ಲಾಕ್ಡೌನ್ ಮುಗಿದ ನಂತರ ಈ ಕೇಂದ್ರದ ಕೆಲ ಸಮಸ್ಯೆಗಳನ್ನು ಸರಿಪಡಿಸುವಂತೆ ಸ್ಧಳದಲ್ಲಿ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್, ತಾಲೂಕು ತಹಶೀಲ್ದಾರ್ ಗೋವಿಂದರಾಜ್ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶೇಖರ್, ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್, ಸದಸ್ಯರುಗಳಾದ ಮಂಜಯ್ಯ, ಪವಿತ್ರ, ಬೋಮೇಗೌಡನ ಚಿಣ್ಣಪ್ಪ, ಕುಮಾರಸ್ವಾಮಿ ಪುನರ್ವಸತಿ ಕೇಂದ್ರದ ಪ್ರಮುಖರಾದ ಅಪ್ಪು, ಬೋಜಮ್ಮ, ಕೃಷ್ಣ, ಅಯ್ಯಣ್ಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿಲ್ಪಾ, ಸಿಬ್ಬಂದಿ ವರ್ಗದವರು ಇದ್ದರು.