ಗೋಣಿಕೊಪ್ಪ ವರದಿ, ಏ. 11: ಕೊರೊನಾ ಮುಂಜಾಗ್ರತೆಗೆ ಮಾಧ್ಯಮ ನೀಡುತ್ತಿರುವ ಬೆಂಬಲ ಮೆಚ್ಚುವಂತದ್ದು ಎಂದು ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಕಟ್ಟೇರ ವಿಶ್ವನಾಥ್ ಅಭಿಪ್ರಾಯಪಟ್ಟರು. ಗೋಣಿಕೊಪ್ಪ ಪ್ರೆಸ್ಕ್ಲಬ್ ಸಭಾಂಗಣದಲ್ಲಿ ಪತ್ರಕರ್ತರಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರ ಮಾಡಿ ಮಾತನಾಡಿದರು. ಈ ಸಂದರ್ಭ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳಾದ ಅಪ್ಪಚ್ಚಂಗಡ ಮೋಟಯ್ಯ, ಚಂಗುಲಂಡ ಸತೀಶ್, ಗೋಣಿಕೊಪ್ಪ ಪ್ರೆಸ್ಕ್ಲಬ್ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಕಾರ್ಯದರ್ಶಿ ಹೆಚ್.ಕೆ. ಜಗದೀಶ್ ಇದ್ದರು.