ನಾಪೋಕ್ಲು, ಏ. 12 : ಬಾಲಕಿಯೊಬ್ಬಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಕೊಳಕೇರಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಬೊಟ್ಟೋಳಂಡ ಡಾಲು ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ತಮಿಳುನಾಡು ಅಂಬೂರು ನಿವಾಸಿ ಕಾರ್ತಿಕ್ ಮತ್ತು ತಂಗಮಣಿ ಇವರ ಹೆಣ್ಣುಮಗು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿದೆ. ಇಬ್ಬರು ಮಕ್ಕಳು ಆಟವಾಡಿಕೊಂಡಿದ್ದ ಸಂದರ್ಭ ಈ ದುರಂತ ಸಂಭವಿಸಿದ್ದು ನಾಪೋಕ್ಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.