ಮಡಿಕೇರಿ, ಏ. 12: ದೆಹಲಿಯ ಧಾರ್ಮಿಕ ಸಮ್ಮೇಳನ ಸಂಬಂಧ ಜಿಲ್ಲೆಯಿಂದ ದೆಹಲಿಗೆ ತೆರಳಿ ಹಿಂತಿರುಗಿರುವ ಜನರು-14, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಜನರು-134, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಇತರೆ ರಾಜ್ಯಗಳ ಜನರು-05, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-153, ಇಲ್ಲಿಯವರೆಗೆ ಒಟ್ಟು 95 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ.
ಹಾಲಿ ದೃಢಪಟ್ಟಿದ್ದ 1 ಪ್ರಕರಣ ಗುಣಮುಖರಾಗಿರುವುದರಿಂದ ಒಟ್ಟು 86 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 9 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.