ಮಡಿಕೇರಿ, ಏ. 14: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀಕೋಟೆ ಮಾರಿಯಮ್ಮ ದೇವಾಲಯದಲ್ಲಿ ತಾ. 16 ಮತ್ತು 17 ರಂದು ನಡೆಯಬೇಕಾಗಿದ್ದ ಪ್ರತಿಷ್ಠಾಪನಾ ವಾರ್ಷಿಕೋತ್ಸವ, ನಾಗಪ್ರತಿಷ್ಠಾಪನಾ ಮಹೋತ್ಸವ, ನಾಗದರ್ಶನ, ಪಾಷಾಣ ಮೂರ್ತಿ ದೈವದ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ದೈವಕೋಲವನ್ನು ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ಮನವಿ ಮಾಡಿದೆ.