ಮಡಿಕೇರಿ, ಏ. 13: ದೆಹಲಿಯ ಧಾರ್ಮಿಕ ಸಮ್ಮೇಳನ ಸಂಬಂಧ ಜಿಲ್ಲೆಯಿಂದ ದೆಹಲಿಗೆ ತೆರಳಿ ಹಿಂತಿರುಗಿರುವ ಜನರು 14, ಜಿಲ್ಲೆ ಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ರಾಜ್ಯದ ಇತರೆ ಜಿಲ್ಲೆಗಳ ಜನರು-82, ಜಿಲ್ಲೆಯಲ್ಲಿ ಗೃಹ ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು-96.
ಇಲ್ಲಿಯವರೆಗೆ ಒಟ್ಟು 100 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. ಹಾಲಿ ದೃಢಪಟ್ಟಿದ್ದ 1 ಪ್ರಕರಣ ಗುಣಮುಖರಾಗಿರುವು ದರಿಂದ ಒಟ್ಟು 89 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿರುತ್ತದೆ. 11 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ಪ್ರಸ್ತುತ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 13 ಶಂಕಿತ ಪ್ರಕರಣಗಳಿರುತ್ತವೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.