ಮಡಿಕೇರಿ, ಏ.13: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಾ. 15 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬೆಳಗ್ಗೆ 11.30 ಗಂಟೆಗೆ ಜಿಲ್ಲೆಯ ವೀರಾಜಪೇಟೆಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಗಡಿ ಪ್ರದೇಶಗಳಿಗೆ ಭೇಟಿ ನೀಡಿ ಕೊರೊನಾ ವೈರಸ್ ವ್ಯಾಪಿಸದಂತೆ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲಿಸಲಿದ್ದಾರೆ. ನಂತರ ವೀರಾಜಪೇಟೆ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಕುಂದು-ಕೊರತೆಗಳ ಪರಿಶೀಲನೆ ನಡೆಸಲಿದ್ದಾರೆ.
ಮಧ್ಯಾಹ್ನ 1.30 ಗಂಟೆಗೆ ಮಡಿಕೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕೊರೊನಾ ವೈರಸ್ ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಹಾಗೂ ಆಹಾರ ವಿತರಣೆ ಕುರಿತಂತೆ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ನಗರದ ನೂತನ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕುಂದು-ಕೊರತೆಗಳ ಪರಿಶೀಲನೆ ನಡೆಸಲಿದ್ದಾರೆ ಎಂದು ಮಾನ್ಯ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್.ರವಿಪ್ರಕಾಶ್ ಅವರು ತಿಳಿಸಿದ್ದಾರೆ.