ಮಡಿಕೇರಿ, ಏ. 14 : ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಕೊಡಗು ಜಿಲ್ಲೆಯಲ್ಲಿ ಎಲ್ಲಾ ನ್ಯಾಯಾಲಯಗಳನ್ನು ಏಪ್ರಿಲ್ 30ರ ತನಕ ಮುಚ್ಚಿ ರಜೆ ವಿಸ್ತರಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯ ಹಾಗೂ ಉಚ್ಚ ನ್ಯಾಯಾಲಯದ ಮಾರ್ಗಸೂಚಿ ಯಂತೆ ರಜೆ ಅವಧಿ ವಿಸ್ತರಿಸಿದ್ದು, ತುರ್ತು ಪ್ರಕರಣಗಳಲ್ಲಿ ಇ-ಪೇಪರ್, ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಿದರೆ, ವೀಡಿಯೋ ಕಾನ್ಫ್ಪ್‍ರೆನ್ಸ್ ಮೂಲಕ ವಿಚಾರಣೆ ನಡೆಸಿ ಕಕ್ಷಿದಾರರಿಗೆ ನ್ಯಾಯ ಒದಗಿಸಲಾಗು ವುದು ಎಂದು ನ್ಯಾಯಾಂಗ ಇಲಾಖೆಯ ಪ್ರಕಟಣೆ ತಿಳಿಸಿದೆ.