ವೀರಾಜಪೇಟೆ, ಏ.14: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳ ಸಂಚಾರವನ್ನು ಸ್ಥಗಿತಗೊಳಿಸಿ ಸಂಕಷ್ಟದಲ್ಲಿರುವ ಸುಮಾರು 48 ಕಾರ್ಮಿಕರುಗಳಿಗೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಅವರು ಪಡಿತರ ಕಿಟ್ಗಳನ್ನು ವಿತರಿಸಿದರು.
ವೀರಾಜಪೇಟೆ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಪಡಿತರ ಕಿಟ್ ವಿತರಣೆಯಲ್ಲಿ ತಾಲೂಕು ತಹಶೀಲ್ದಾರ್ ಎಂ.ಎಲ್. ನಂದೀಶ್, ಪ.ಪಂ. ಮುಖ್ಯಾಧಿಕಾರಿ ಶ್ರೀಧರ್, ಸಹಾಯಕ ಅಭಿಯಂತರ ಎನ್.ಪಿ. ಹೇಮ್ಕುಮಾರ್, ಖಾಸಗಿ ಬಸ್ಸು ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.