ಕೂಡಿಗೆ, ಏ. 14: ಕೊರೊನಾ ವೈರಸ್ ಹಿನ್ನೆಲೆ ಲಾಕ್‍ಡೌನ್ ಆಗಿದ್ದರೂ ಸಹ ಅನಾವಶ್ಯಕವಾಗಿ ವಾಹನ ಚಾಲನೆ ಮಾಡುತ್ತಿದ್ದ ಬೈಕ್ ಮತ್ತು ಕಾರುಗಳನ್ನು ಪೊಲೀಸ್ ವಶಪಡಿಸಿಕೊಂಡಿದ್ದಾರೆ.

ಕೂಡಿಗೆ, ಹೆಬ್ಬಾಲೆ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ್ ನೇತೃತ್ವದಲ್ಲಿ ಸಿಬ್ಬಂದಿ ವರ್ಗದವರು ಕೂಡುಮಂಗಳೂರು, ಹಾರಂಗಿಗಳಿಂದ 40 ಬೈಕ್‍ಗಳನ್ನು ವಶಪಡಿಸಿಕೊಂಡು ತಿಳುವಳಿಕೆ ಹೇಳಿ ಬಿಟ್ಟಿದ್ದಾರೆ. ಈ ಸಂದರ್ಭ ಸಿಬ್ಬಂದಿಗಳಾದ ಪ್ರಸನ್ನ, ವಿವೇಕ, ಗಣೇಶ್ ಮೊದಲಾದವರು ಇದ್ದರು.