ಗೋಣಿಕೊಪ್ಪ, ಏ. 14: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅವರಣದಲ್ಲಿ ತಾತ್ಕಾಲಿಕವಾಗಿ ವ್ಯವಸ್ಥೆ ಕಲ್ಪಿಸಿದ ತರಕಾರಿ ವ್ಯಾಪಾರದ ಸ್ಥಳಕ್ಕೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಲಹೆ ನೀಡಿದರು. ವೀರಾಜಪೇಟೆ ತಾಲೂಕು ಬಿ.ಜೆ.ಪಿ ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್ ಇತರರು ಹಾಜರಿದ್ದರು.