ಗುಡ್ಡೆಹೊಸೂರು, ಏ. 13: ಇಲ್ಲಿಗೆ ಸಮೀಪದ ತೆಪ್ಪದಕಂಡಿ ಬಳಿ ನೂತನವಾಗಿ ತೂಗು ಸೇತುವೆ ನಿರ್ಮಿಸಲಾಗಿತ್ತು. ಡಿ.ವಿ. ಸದಾನಂದಗೌಡರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಈ ತೂಗು ಸೇತುವೆಯನ್ನು ನಿರ್ಮಿಸಲಾಗಿತ್ತು.

ಮೈಸೂರು ಜಿಲ್ಲೆಯ ಹಲವಾರು ಗ್ರಾಮಸ್ಥರು ಇಲ್ಲಿ ತೆಪ್ಪದ ಮೂಲಕ ದಾಟಿ ನಿತ್ಯದ ವ್ಯವಹಾರ ನಡೆಸುತ್ತಿದ್ದರು. ಕಾವೇರಿ ನದಿಯ ಒಂದು ಭಾಗದ ಮೈಸೂರು ಜಿಲ್ಲೆಯ ಸಾವಿರಾರು ಮಂದಿ ಕೊಡಗು ಜಿಲ್ಲೆಯಲ್ಲಿ ವ್ಯವಹಾರ ನಡೆಸುತ್ತಿದ್ದರು. ಈ ಸೇತುವೆ ಮೂಲಕ ಪ್ರತಿನಿತ್ಯ ನೂರಾರು ದ್ವಿಚಕ್ರ ವಾಹನಗಳು ಓಡಾಡುತ್ತಿದ್ದವು. ಇದಕ್ಕೆ ಈಗ ಕಡಿವಾಣ ಬಿದ್ದಾಂತಾಗಿದೆ. ಜಿಲ್ಲೆಯ ಎಲ್ಲಾ ನಾಲ್ಕು ದಿಕ್ಕುಗಳ ಗಡಿಭಾಗದ ಗೇಟ್‍ಗಳನ್ನು ಬಂದ್ ಮಾಡಲಾಗಿದೆ. ಅದೇ ರೀತಿ ಇದೀಗ ಈ ಸೇತುವೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಜಿಲ್ಲಾ ಪೊಲೀಸ್ ಉನ್ನತಾಧಿಕಾರಿ ಸುಮನ್ ಡಿ.ಪಿ. ಅವರ ಮಾರ್ಗದರ್ಶನದಲ್ಲಿ ಕುಶಾಲನಗರ ವೃತ್ತನೀರಿಕ್ಷಕ ಮಹೇಶ್, ಡಿ.ವೈ.ಎಸ್.ಪಿ. ಶೈಲೇಂದ್ರ ಮತ್ತು ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ನಂದೀಶ್ ಕುಮಾರ್ ಅವರು ಈ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಲಾಕ್‍ಡೌನ್ ಸಮಯದಲ್ಲಿ ಯಾರೂ ಮನೆಯಿಂದ ಹೊರಬರದಂತೆ ನಿಗಾವಹಿಸುತ್ತಿದ್ದಾರೆ. ಪ್ರತಿನಿತ್ಯ ಪೊಲೀಸ್ ಸಿಬ್ಬಂದಿಗಳಾದ ನವೀನ್, ಪ್ರವೀಣ್, ಮುನಿವರ್ ಪಾಷ ಮುಂತಾದವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.