ಸೋಮವಾರಪೇಟೆ,ಮಾ.13: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ತಮ್ಮ ತಮ್ಮ ಮನೆಯಲ್ಲಿಯೇ ಆಚರಿಸುವ ಮೂಲಕ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸಬೇಕೆಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ತಿಳಿಸಿದ್ದಾರೆ.

ಕೊರೊನಾ ವೈರಸ್‍ನಿಂದಾಗಿ ಲಾಕ್‍ಡೌನ್ ಆದೇಶ ಜಾರಿಯಲ್ಲಿರುವದರಿಂದ ಯಾರೂ ಸಹ ಮನೆಯಿಂದ ಹೊರಬಂದು ಗುಂಪುಗೂಡದೇ, ತಮ್ಮ ತಮ್ಮ ಮನೆಯಲ್ಲಿಯೇ ಅಂಬೇಡ್ಕರ್ ಅವರ ಭಾವಚಿತ್ರವನ್ನಿಟ್ಟು, ಮಾಲಾರ್ಪಣೆ ಮಾಡುವ ಮೂಲಕ ಮಹಾನ್ ಚೇತನವನ್ನು ಸ್ಮರಿಸಬೇಕೆಂದು ರಂಜನ್ ಅವರು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.