ಕೊಡಗು ಜಿಲ್ಲೆಗೆ ಅತ್ಯವಶ್ಯವಾಗಿ ಬೇಕಾಗಿರುವ ಸುಸಜ್ಜಿತ ಲ್ಯಾಬ್ ನಿರ್ಮಾಣಕ್ಕೆ ಸರಕಾರ ಈಗಾಗಲೇ ಯೋಜನೆ ರೂಪಿಸಿದ್ದು, ಮೇ ಅಂತ್ಯದೊಳಗೆ ನೂತನ ಲ್ಯಾಬ್ ನಿರ್ಮಾಣವಾಗಲಿದೆ ಎಂದು ಸಚಿವ ಸೋಮಣ್ಣ ಭರವಸೆಯಿತ್ತರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸೇತುವೆ ಹಾಗೂ ಸಣ್ಣ ನೀರಾವರಿ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ತೊಂದರೆಯಿಲ್ಲ. ಎಲ್ಲ ಇಲಾಖೆಗಳ ಅಧಿಕಾರಿಗಳು ಕೊಡಗಿನ ಹಿತಕ್ಕೆ ಪೂರಕವಾಗಿ ಕೆಲಸ ಮಾಡುವಂತೆ ಸೂಚಿಸಿದರು.