ಸಿದ್ದಾಪುರ, ಏ. 15: ಎಲ್ಲಾ ಜಾತಿ ಧರ್ಮದವರು ಪರಸ್ಪರ ಅನ್ಯೋನ್ಯತೆಯಿಂದ ಇರುವ ಗ್ರಾಮದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ಮೇಲೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಕ್ಡೌನ್ ಹಿನ್ನೆಲೆ ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮೂಲಕ ಕಡಿಮೆ ಬೆಲೆಗೆ ಗ್ರಾಮದ ಸ್ವಯಂ ಸೇವಕರ ಮುಖಾಂತರ ಮನೆ ಮನೆಗೆ ತರಕಾರಿ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ವಾರದಲ್ಲಿ ಮೂರು ದಿನ ಅಗತ್ಯ ವಸ್ತುಗಳನ್ನು ಖರೀದಿಸಲು ಜಿಲ್ಲಾಡಳಿತ ಅವಕಾಶ ಕಲ್ಪಿಸಲಾಗಿದೆಯಾ ದರೂ ಗ್ರಾಮದಲ್ಲಿರುವ ಕೂಲಿ ಕಾರ್ಮಿಕರಿಗೆ ಹಾಗೂ ಬಡವರಿಗೆ ವಾಹನದ ವ್ಯವಸ್ಥೆ ಇಲ್ಲದೆ ಹತ್ತಿರದ ಪಟ್ಟಣಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಗ್ರಾ.ಪಂ. ಮೂಲಕ ಮನೆ ಬಾಗಿಲಿಗೆ ಕಡಿಮೆ ದರದಲ್ಲಿ ತರಕಾರಿಗಳನ್ನು ಪೂರೈಸ ಲಾಗುತ್ತಿದೆ. ಇದರಲ್ಲಿ ರಾಜಕೀಯ ಹಾಗೂ ಧರ್ಮವನ್ನು ಹೆಸರಿಸಿ ಪತ್ರಿಕೆಯೊಂದು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಬಿತ್ತರಿಸುವ ಮೂಲಕ ಶಾಂತಿಯುತವಾಗಿ ರುವ ಗ್ರಾಮದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದ್ದು, ಈ ಬಗ್ಗೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ದರು. ಗ್ರಾ.ಪಂ. ಸದಸ್ಯ ಸಲೀಮ್ ಇದ್ದರು.