ಸಿದ್ದಾಪುರ,ಏ.15: ಲಾಕ್ ಡೌನ್ ಹಿನ್ನೆಲೆಯಲ್ಲಿ ನೆಲ್ಯಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಸ್ಥರು ಮನೆಯಿಂದ ಹೊರ ಬರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ತರಕಾರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇದೀಗ ಗ್ರಾಮ ಪಂಚಾಯಿತಿ ಪಿ.ಡಿ.ಓ. ಅನಿಲ್ ಕುಮಾರ್ ನೇತೃತ್ವದಲ್ಲಿ ಕೊರೊನಾ ನಿಯಂತ್ರಣ ತಂಡದಿಂದ ಪಂಚಾಯಿತಿ ಕಚೇರಿ ಆವರಣದಲ್ಲಿ ಅಗ್ಗದ ದರದಲ್ಲಿ ಕೋಳಿಗಳನ್ನು ಮಾರಾಟ ಮಾಡಲಾಯಿತು. ಗ್ರಾಮಸ್ಥರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳ ಸಮ್ಮುಖದಲ್ಲಿ ಜೀವದ ಕೋಳಿಗಳನ್ನು ಕೆ.ಜಿ.ಗೆ ರೂ.125 ರ ಪ್ರಕಾರ ಮಾರಾಟ ಮಾಡಲಾಯಿತು. ಕಳೆದ ಕೆಲವು ದಿನಗಳಿಂದ ಮಾಂಸ ಪ್ರಿಯರಿಗೆ ಮಾಂಸಗಳು ಸಿಗದ ಹಿನ್ನೆಲೆಯಲ್ಲಿ ಕೋಳಿಯನ್ನು ಖರೀದಿಸಲು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸೆಫಿಯ, ಸದಸ್ಯರುಗಳು ಹಾಜರಿದ್ದರು. ಸಿದ್ದಾಪುರದಲ್ಲಿ ಬುಧವಾರದಂದು ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ವಹಿವಾಟು ನಡೆಯಿತು. -ವಾಸು