ವೀರಾಜಪೇಟೆ, ಏ. 15: ಮೊರಾರ್ಜಿ ವಸತಿ ಶಾಲೆಯ ಕ್ವಾರಂಟೈನ್‍ನಲ್ಲಿ ಆಶ್ರಯ ಪಡೆದಿರುವ ಕೇರಳದಿಂದ ವಲಸೆ ಬಂದ ಕಾರ್ಮಿಕರ ಕ್ವಾರಂಟೈನ್ ಅವಧಿ ತಾ. 12ಕ್ಕೆ ಮುಗಿದಿದ್ದರೂ ಆರೋಗ್ಯದ ದೃಷ್ಟಿಯಿಂದ ಇನ್ನೂ ಕೆಲವು ದಿನಗಳವರೆಗೆ ಇಲ್ಲಿಯೇ ಮುಂದು ವರೆಸಿ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ವಿಚಾರ ವೀರಾಜಪೇಟೆ, ಏ. 15: ಮೊರಾರ್ಜಿ ವಸತಿ ಶಾಲೆಯ ಕ್ವಾರಂಟೈನ್‍ನಲ್ಲಿ ಆಶ್ರಯ ಪಡೆದಿರುವ ಕೇರಳದಿಂದ ವಲಸೆ ಬಂದ ಕಾರ್ಮಿಕರ ಕ್ವಾರಂಟೈನ್ ಅವಧಿ ತಾ. 12ಕ್ಕೆ ಮುಗಿದಿದ್ದರೂ ಆರೋಗ್ಯದ ದೃಷ್ಟಿಯಿಂದ ಇನ್ನೂ ಕೆಲವು ದಿನಗಳವರೆಗೆ ಇಲ್ಲಿಯೇ ಮುಂದು ವರೆಸಿ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ವಿಚಾರ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್, ಜಿಲ್ಲಾ ಪಂಚಾಯಿತಿ ಸದಸ್ಯ ಮಹೇಶ್ ಗಣಪತಿ, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್, ಉಪ ಆಯುಕ್ತ ಜವರೇಗೌಡ, ತಾಲೂಕು ತಹಶೀಲ್ದಾರ್ ಎಂ.ಎಲ್. ನಂದೀಶ್ ಮತ್ತಿತರರು ಹಾಜರಿದ್ದರು.ಬಳಿಕ ಉಸ್ತುವಾರಿ ಸಚಿವ ಸೋಮಣ್ಣ ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಮನವಿಗಳನ್ನು ಸ್ವೀಕರಿಸಿದರು. ಕೆಲವರು ಸಮುದ್ರದ ಹಸಿ ಮೀನು ಮಾರಾಟಕ್ಕೆ ಅನುಮತಿ ಕೇಳಿದಾಗ ಲಾಕ್‍ಡೌನ್ ಮುಗಿಯುವ ತನಕ ಕೇರಳದ ಹಸಿಮೀನು ಮಾರಾಟಕ್ಕೆ ಅವಕಾಶವಿಲ್ಲ, ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡಿ ಮುಂದೆ ನೋಡೋಣ ಎಂದರು.

(ಮೊದಲ ಪುಟದಿಂದ) ಸಚಿವರು ಪ್ರವಾಸಿ ಮಂದಿರದಲ್ಲಿ ಕೆಲ ಹೊತ್ತು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಇತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೊರೊನಾ ವೈರಸ್ ಕುರಿತಂತೆ ಲಾಕ್‍ಡೌನ್ ಸಂಬಂಧದಲ್ಲಿ ವಿಚಾರ ವಿನಿಮಯ ಮಾಡಿದರು. ಪಟ್ರಪಂಡ ರಘುನಾಣಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ಶಶಿ ಸುಬ್ರಮಣಿ, ಕಾಫಿ ಮಂಡಳಿ ಉಪಾಧ್ಯಕ್ಷೆ ರೀನಾ ಪ್ರಕಾಶ್ ಮುಂತಾದವರು ಹಾಜರಿದ್ದರು.