ಕೂಡಿಗೆ, ಏ. 16: ಕೂಡುಮಂಗ ಳೂರು ಗ್ರಾ.ಪಂ. ವ್ಯಾಪ್ತಿಯ ವ್ಯಕ್ತಿಯೊರ್ವ ಗಂಟಲು ನೋವಿನಿಂದ ಮೊದಲು ಕುಶಾಲನಗರ ಆಸ್ಪತ್ರೆಗೆ ಹೋಗಿ ನಂತರ ಮಡಿಕೇರಿ ಜಿಲ್ಲಾಸ್ಪತ್ರೆ ಯಲ್ಲಿ ದಾಖಲಾಗಿದ್ದು, ಕುಶಾಲನಗರ ಹೋಬಳಿ ವ್ಯಾಪ್ತಿಯ ಜನರು ಆತಂಕಕ್ಕೊಳಗಾದ ಘಟನೆ ನಡೆದಿದೆ. ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿರುವುದು ಗಾಳಿ ಸುದ್ದಿಯಾಗಿ ಹಬ್ಬುತ್ತಿದ್ದು, ಸಾರ್ವಜನಿಕರು ಆತಂಕಕ್ಕೀಡಾಗಿದ್ದಾರೆ.

ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಮಗಳು ಕೇರಳ ಕಾಸರಗೋಡಿನಿಂದ ಆಗಮಿಸಿದ ಹಿನೆÀ್ನಲೆ ಆರೋಗ್ಯ ಇಲಾಖೆ ಹೋಂ ಕ್ವಾರಂಟೈನ್ ವಿಧಿಸಲಾಗಿತ್ತು.

ಈ ಹಿನ್ನೆಲೆ ಕಳೆದೆರಡು ದಿನಗ ಳಿಂದ ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ವ್ಯಕ್ತಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಕಂದಾಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಸಂದರ್ಭ ಕಂದಾಯ ಪರಿವೀಕ್ಷಕ ಮಧುಸೂಧನ್, ಗ್ರಾಮಲೆಕ್ಕಿಗ ಗುರುದರ್ಶನ್, ಕುಶಾಲನಗರ ಗ್ರಾಮಾಂತರ ಪೆÇಲೀಸ್ ಠಾಣಾಧಿಕಾರಿ ನಂದೀಶ್ ಕುಮಾರ್ ಹಾಗೂ ಆಶಾಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಸಿಬ್ಬಂದಿ ಇದ್ದರು.

ಸೋಮವಾರಪೇಟೆ ದಂಡಾಧಿಕಾರಿ ಗೋವಿಂದರಾಜು ಮಾತನಾಡಿ, ವ್ಯಕ್ತಿಯು ಗಂಟಲು ನೋವು ಹಿನ್ನೆಲೆ ಆಸ್ಪತ್ರೆಗೆ ದಾಖಲಾ ಗಿದ್ದು, ಯಾವುದೂ ಖಚಿತವಾಗಿರು ವುದಿಲ್ಲ. ಗ್ರಾಮಸ್ಥರು ಆತಂಕಗೊಳ ಗಾಗುವ ಅವಶ್ಯಕತೆ ಇಲ್ಲ. ಈಗಾಗಲೇ ವ್ಯಕ್ತಿಯ ಗಂಟಲು ದ್ರವವನ್ನು ಮೈಸೂರಿಗೆ ಕಳುಹಿಸಿಕೊಡಲಾಗಿದೆ. ಗಾಳಿಸುದ್ದಿಗೆ ಕಿವಿಕೊಡದೇ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿರಲು ಮನವಿ ಮಾಡಿದ ಅವರು, ಸುಳ್ಳು ಸುದ್ದಿಯನ್ನು ಪ್ರಚಾರಗೊಳಿಸುವವರ ವಿರುದ್ಧ ಕಾನೂನು ಕ್ರಮ ವಹಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.