ಕೂಡಿಗೆ, ಏ.20: ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾವಿನಹಳ್ಳ ಗ್ರಾಮದಲ್ಲಿ ನಿನ್ನೆ ದಿನ ಉಸಿರಾಟದ ತೊಂದರೆಯಿಂದ ಎರಡೂವರೆ ವರ್ಷದ ಮಗುವಿನ ಮನೆಗೆ ವೈದ್ಯಾಧಿಕಾರಿಗಳ ತಂಡ ಭೇಟಿ ನೀಡಿತ್ತು. ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಮೃತ ಮಗುವಿನ ಮಾಹಿತಿ ಪಡೆದು ತಾಯಿಯ ಆರೋಗ್ಯದ ಬಗ್ಗೆ ವಿಚಾರಿಸಿದರು.
ಈ ಸಂದರ್ಭ ಆರೋಗ್ಯ ಹಿರಿಯ ಸಹಾಯಕಿಯರು, ಕೂಡಿಗೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಪ್ರೇಮಲೀಲಾ ಅಭಿವೃದ್ಧಿ ಅಧಿಕಾರಿ ಶಿಲ್ಪಾ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಸೇರಿದಂತೆ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.