ಮಡಿಕೇರಿ, ಏ.20: ಕೊಡಗು ಜಿಲ್ಲೆಯಲ್ಲಿರುವ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಯಾವುದೇ ಸಹಾಯಕ್ಕಾಗಿ ಜಿಲ್ಲಾಡಳಿತದಿಂದ 24x7 ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದ್ದು, ಸಹಾಯವಾಣಿ ಸಂಖ್ಯೆ: 08272-221215 ಆಗಿದೆ. ಈ ನಿಟ್ಟಿನಲ್ಲಿ ಹಿರಿಯ ನಾಗರಿಕರು ಮತ್ತು ವಿಕಲಚೇತನರು ಇದರ ಸದುಪಯೋಗವನ್ನು ಪಡೆದು ಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.