ಮಡಿಕೇರಿ, ಏ. 21: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಾಕಾರಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊನ್ನತ್‍ಮೊಟ್ಟೆ ನಿವಾಸಿ ನಾಸಿರ್ ಎಂಬ ವ್ಯಕ್ತಿಯನ್ನು ಕೊಡಗು ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಬಂಧಿಸಿದ್ದಾರೆ. ಕೊಡಗು ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.