ಮಡಿಕೇರಿ, ಏ.21: ಕೊರೊನಾಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಕಳೆದ 28 ದಿನಗಳಿಂದ ಯಾವುದೇ ರೀತಿಯ ಪಾಸಿಟಿವ್ ಪ್ರಕರಣಗಳು ಕಂಡು ಬಂದಿಲ್ಲ. ಇದೇ ರೀತಿ ಮುಂದಿನ ದಿನಗಳಲ್ಲಿಯೂ ಕಾಪಾಡಿಕೊಂಡು ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಸಲಹೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸ್ಥಿತಿಗತಿ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದುವರೆಗೆ ಕೋವಿಡ್-19 ಸಂಬಂಧ ಜ್ವರ ಪ್ರಕರಣಗಳು, ಕಂಟೈನ್‍ಮೆಂಟ್‍ನಲ್ಲಿ ಇರುವವರು ಮತ್ತಿತರ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಳೆದ 28 ದಿನಗಳಿಂದ ಯಾವುದೇ ರೀತಿಯ ಪಾಸಿಟಿವ್ ಪ್ರಕರಣ ಕಂಡುಬರದಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುದ್ದಿ ಗೋಷ್ಠಿ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದು, ಮೇ 3 ರವರೆಗೆ ಲಾಕ್‍ಡೌನ್ ಇರುವುದರಿಂದ ಮತ್ತಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಸರ್ಕಾರದ ನಿರ್ದೇಶನಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ ಮತ್ತಿತರವನ್ನು ಕಂಟೈನ್‍ಮೆಂಟ್ ಪ್ರದೇಶದಲ್ಲಿ ಒದಗಿಸಬೇಕು ಹೃದಯ, ಶ್ವಾಸಕೋಶ ಇತರೆ ಖಾಯಿಲೆಗಳ ಬಗ್ಗೆಯೂ ಸಹ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಸೂಚಿಸಿದರು.
ಯಾವುದೇ ರೀತಿಯ ರೋಗ ಲಕ್ಷಣ ಬಂದರೂ ಸಹ ಸರಿಯಾಗಿ ತಪಾಸಣೆ ಮಾಡಬೇಕು, ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಔಷಧಿಗಳು ದಾಸ್ತಾನು ಇರಬೇಕು. ಸಕಾಲದಲ್ಲಿ ಚಿಕಿತ್ಸೆ ದೊರೆಯು ವಂತಾಗಬೇಕು ಎಂದು ಸೂಚಿಸಿದರು.
ಆಹಾರ ಪೂರೈಕೆ ಸಂಬಂಧಿಸಿ ದಂತೆ ಜಿಲ್ಲೆಯ ಎಲ್ಲಾ ಕುಟುಂಬ ಗಳಿಗೂ ಪಡಿತರ ದೊರೆಯುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸ ಬೇಕು. ಕೂಲಿ ಕಾರ್ಮಿಕರು, ನಿರ್ಗತಿಕರು, (ಮೊದಲ ಪುಟದಿಂದ) ಪಡಿತರ ಚೀಟಿ ಇಲ್ಲದವರು ಎಲ್ಲರಿಗೂ ಆಹಾರ ತಲುಪಿಸಬೇಕು ಎಂದು ಸೂಚಿಸಿ ದರು. ಬಿಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಕುಟುಂಬ ಕ್ಕೂ ಸಹ ಆಹಾರ ಪೂರೈಕೆ ಮಾಡಬೇಕು. ಮೇ 3 ರ ವರೆಗೆ ಲಾಕ್‍ಡೌನ್ ಇರುವುದರಿಂದ ಆಹಾರ ಸಿಕ್ಕಿಲ್ಲ ಎಂಬ ದೂರುಗಳು ಬರಬಾರದು ಎಂದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ, ಕೊರೊನಾ ಸಂಬಂಧ ಜಿಲ್ಲಾಡಳಿತ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿದೆ. ಜಿಲ್ಲೆಯಲ್ಲಿ ಪಡಿತರ ಚೀಟಿ ಇಲ್ಲದವರಿಗೂ ಸಹ ಪಡಿತರ ವಿತರಿಸಲಾಗುತ್ತದೆ. ಲೈನ್‍ಮನೆಗಳಲ್ಲಿ ವಾಸಿಸುವ ಕಾರ್ಮಿಕರು, ವಲಸಿಗ ಕಾರ್ಮಿಕರು ಹೀಗೆ ತಾಲೂಕು ಮಟ್ಟದಲ್ಲಿ ಆಹಾರ ಕಿಟ್ ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಆಹಾರ ಇಲಾಖೆಯ ಉಪ ನಿರ್ದೇಶಕ ಗೌರವ್ ಕುಮಾರ್ ಶೆಟ್ಟಿ ಅವರು ಈಗಾಗಲೇ ಶೇ.93 ರಷ್ಟು ಆಹಾರ ಪೂರೈಕೆಯಾಗಿದ್ದು. ಬಿಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸಿರುವ 4,500 ಕುಟುಂಬಗಳಿಗೂ ಆಹಾರ ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಪಡಿತರ ಚೀಟಿ ಇಲ್ಲದ ಲೈನ್‍ಮನೆ ಹಾಗೂ ಕಾರ್ಮಿಕರಿಗೂ ಆಹಾರವನ್ನು ಪೂರೈಸಲಾಗಿದೆ ಎಂದು ನೋಡಲ್ ಅಧಿಕಾರಿಗಳಾದ ರಾಜು, ಭಾರತಿ, ತಮ್ಮಯ್ಯ ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀಕ್ಷಕ ಡಾ.ಲೋಕೇಶ್, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್ ಅವರು ಕೊರೊನಾಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ. ಜವರೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ನೋಡಲ್ ಅಧಿಕಾರಿಗಳಾದ ಸಿ.ಶಿವಕುಮಾರ್, ಶ್ರೀನಿವಾಸ್, ಜಗನ್ನಾಥ್, ಅರುಂಧತಿ, ಶಶಿಧರ್, ಪೌರಾಯುಕ್ತರಾದ ರಮೇಶ್, ಅಬಕಾರಿ ಉಪ ಆಯುಕ್ತೆ ಪಿ.ಬಿಂದುಶ್ರೀ, ಡಿಡಿಪಿಐ ಪಿ.ಎಸ್ ಮಚ್ಚಾಡೋ, ಅಲ್ಪಸಂಖ್ಯಾತರ ಇಲಾಖೆಯ ಲಿಂಗರಾಜು, ಶ್ರೀಧರನ್, ಗಾಯತ್ರಿ, ಆರ್‍ಸಿಎಚ್ ಅಧಿಕಾರಿ ಗೋಪಿನಾಥ್, ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಕುಮಾರ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ತಾ.ಪಂ.ಇಒಗಳಾದ ಲಕ್ಷ್ಮೀ, ಸುನೀಲ್ ಕುಮಾರ್ ತಹಶೀಲ್ದಾರರಾದ ಮಹೇಶ್, ನಂದೀಶ್, ಗೋವಿಂದರಾಜು, ಪ.ಪಂ.ಮುಖ್ಯಾಧಿಕಾರಿಗಳಾದ ಶ್ರೀಧರ್, ಸಂಜೀವ್ ಕುಮಾರ್, ರಮೇಶ್ ಇತರರು ಇದ್ದರು.