ಇಂದು ವಿಶ್ವ ಭೂಮಿ ದಿನ. ಪ್ರತಿ ವರ್ಷ ಜಗತ್ತಿನ ಎಲ್ಲಾ ದೇಶಗಳಲ್ಲಿ ಏಪ್ರಿಲ್ 22 ರಂದು ವಿಶ್ವ ಭೂ ದಿನ (ಹುಟ್ಟುಹಬ್ಬ) ವನ್ನು ಆಚರಿಸಲಾಗುತ್ತದೆ. 1970 ಏಪ್ರಿಲ್ 22 ರಂದು ಅಮೇರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಯುನೆಸ್ಕೋ ಸಮಾವೇಶದಲ್ಲಿ ‘ಪರಿಸರ ಅರಿಯಿರಿ’ ಎಂಬ ಘೋಷಣೆಯಡಿ ಆರಂಭವಾದ ಭೂಮಿ ದಿನಕ್ಕೆ ಇಂದಿಗೆ 50 ವರ್ಷಗಳಾಗಿದೆ. ಕಳೆದ 50 ವರ್ಷಗಳಿಂದ ಪ್ರತಿವರ್ಷ ಜಾಗತಿಕ ಪರಿಸರ ಸಮಸ್ಯೆಗಳ ಕ್ಷಿಪ್ರ ಪರಿಹಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ವಿಷಯದ ಬಗ್ಗೆ ವಿಶ್ವದಾದ್ಯಂತ ಗಮನ ಸೆಳೆಯಲು ಸಂಯುಕ್ತ ರಾಷ್ಟ್ರಗಳ ಪರಿಸರ ಕಾರ್ಯಕ್ರಮ (ಯು.ಎನ್.ಇ.ಪಿ.)ಅಡಿ ಭೂ ರಕ್ಷಣೆಗೆ ವ್ಯವಸ್ಥೆಮಾಡಲಾಗಿದೆ.
ಪ್ರಸಕ್ತ ವರ್ಷ (2020ನೇ ವರ್ಷ)ದಲ್ಲಿ ‘ವಾಯುಗುಣ ಸಕ್ರಿಯತೆ’ ಎಂಬ ಶೀರ್ಷಿಕೆಯಡಿ ವಿಶ್ವ ಭೂಮಿ ದಿನವನ್ನು ಆಚರಿಸಲಾಗುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಭೂಮಿಯ ಮೇಲೆ ಅವ್ಯಾಹತವಾಗಿ ನಡೆದ ಮನುಷ್ಯನ ದೌರ್ಜನ್ಯಗಳಿಂದಾಗಿ ಭೂಮಿಯ ಸಂಪನ್ಮೂಲಗಳು ದಿನೇ ದಿನೇ ಕ್ಷೀಣಿಸುತ್ತಿವೆ. ಪ್ರಕೃತಿಯ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳಿಂದಾಗಿ ವರ್ಷದಿಂದ ವರ್ಷಕ್ಕೆ ವಾಯುಗುಣ ಬದಲಾವಣೆ ಉಂಟಾಗುತ್ತಿದೆ. ಇದರಿಂದ ನಿರಂತರವಾಗಿ ಸಂಭವಿಸುತ್ತಿರುವ ಜಾಗತಿಕ ತಾಪಮಾನ, ಹವಾಮಾನ ವೈಪರೀತ್ಯ, ಅಂತರ್ಜಲದ ಕ್ಷೀಣತೆ, ಅತಿವೃಷ್ಠಿ, ಅನಾವೃಷ್ಟಿ, ಅಕಾಲಿಕ ಮಳೆ, ಪ್ರವಾಹದಂತಹ ಪ್ರಕೃತಿ ವಿಕೋಪಗಳು ಇಡೀ ಭೂಮಂಡಲಕ್ಕೆ ಸವಾಲಾಗಿ ಪರಿಣಮಿಸಿವೆ. ನಾವು ನೆಲ-ಜಲ, ಅರಣ್ಯ, ವನ್ಯಜೀವಿಗಳು ಹಾಗೂ ಜೀವಿ ವೈವಿಧ್ಯ ಸಂರಕ್ಷಿಸುವ ಮೂಲಕ ಪರಿಸರ ಸಂರಕ್ಷಿಸಬೇಕಿದೆ.
ಇಂದು ನಾವು ಗಾಳಿಶಕ್ತಿ, ಸೌರಶಕ್ತಿ, ಜೀವದ್ರವ್ಯಶಕ್ತಿ(ಜೈವಿಕ ಇಂಧನ), ಅಲೆಶಕ್ತಿಗಳೆಲ್ಲವನ್ನೂ ಮತ್ತೆ ಬಳಕೆಗೆ ಈಗೀಗ ತರುತ್ತಿದ್ದೇವಾದರೂ ಫಾಸಿಲ್ ಇಂಧನ(ಪೆಟ್ರೋಲಿಯಂ)ಗಳು ಇಲ್ಲದಿದ್ದರೆ ನಮ್ಮ ಒಂದು ದಿನವನ್ನೂ ಕಳೆಯುವುದು ನಮಗೆ ಕಷ್ಟವಾಗುತ್ತಿದೆ.
ಈ ಬಗೆಯೆ ಪೆಟ್ರೋಲ್ ದಾಸ್ಯದಿಂದ ಹೊರಬರುವ ಮಾರ್ಗಗಳನ್ನು ನಾವು ಆದಷ್ಟು ಶೀಘ್ರವಾಗಿ ಹುಡುಕಬೇಕಿದೆ. ವೈಯಕ್ತಿಕ ಮಟ್ಟದಲ್ಲಿ ನಮ್ಮ ನಡವಳಿಕೆಗಳು ಬದಲಾಗಬೇಕಿದೆ. ಪರಿಸರ ರಕ್ಷಣೆಯ ಕಾನೂನುಗಳಿಗೆ ನಾವೆಲ್ಲ ಬದ್ಧರಾಗಬೇಕಾಗಿದೆ. ಸಾಮೂಹಿಕ ಸ್ತರದಲ್ಲಿ ಇಡೀ ಸಮಾಜವೇ ಒಂದಾಗಿ ಭೂ ಸಂರಕ್ಷಣೆಯಲ್ಲಿ ತೊಡಗಬೇಕಾಗಿದೆ.
ಆದ್ದರಿಂದ ನಿಜವಾದ ಭೂ ದಿನಾಚರಣೆಯಲ್ಲಿ ನಾವು ನಮ್ಮ ನಮ್ಮ ಮನೆಗಳಲ್ಲಿ, ವೈಯಕ್ತಿಕ ಮಟ್ಟದಲ್ಲಿ ಹಾಗೂ ಸಾಮೂಹಿಕವಾಗಿ ಈ ಕೆಳಗಿನ ಜೀವನ ಕ್ರಮ /ಹವ್ಯಾಸಗಳನ್ನು ರೂಢಿಸಿಕೊಳ್ಳೋಣ.
v
v
v
ಬನ್ನಿ ! ಇರುವು ದೊಂದೇ ಭೂಮಿ ; ಇದೇ ನಮ್ಮ ಮನೆ, ಇದನ್ನು ಸಂರಕ್ಷಿಸಿ, ಸಂಪೋಷಿಸಿ ಮುಂದಿನ ಪೀಳಿಗೆಗೆ ಈ ಭೂಮಿಯನ್ನು ಪುನಃಶ್ಚೇತ ಗೊಳಿಸೋಣ.
- ಟಿ.ಜಿ. ಪ್ರೇಮಕುಮಾರ್