ಸೋಮವಾರಪೇಟೆ,ಏ.21: ದೇಶದಲ್ಲಿ ಲಾಕ್ಡೌನ್ ಹಿನ್ನೆಲೆಯಲ್ಲಿ ತಾ.26ರ ಬಸವ ಜಯಂತಿಯನ್ನು ವಚನಪಠಣ ಹಾಗೂ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮನೆಯಲ್ಲೇ ಆಚರಿಸಿಕೊಳ್ಳಬೇಕು ಎಂದು ಶರಣ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಕ್ಷ ಎಸ್. ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 9.30ಕ್ಕೆ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪುತ್ತಳಿಗೆ ಪುಷ್ಪನಮನ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.