ಕೂಡಿಗೆ, ಏ. 21: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಬ್ಬಾಲೆ ಕೂಡಿಗೆ ತೊರೆನೂರು ಪ್ರದೇಶಗಳಲ್ಲಿ ಅನಧಿಕೃತವಾಗಿ ಚಾಲನೆ ಮಾಡುತ್ತಿದ್ದ 200ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನಂದೀಶ ನೇತೃತ್ವದಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂದರ್ಭ ಸಹಾಯಕ ಠಾಣಾಧಿಕಾರಿ ರವಿ, ಪೊಲೀಸ್ ಪೇದೆಗಳಾದ ಪ್ರಸನ್ನ, ತೀಲಕ್, ರಾಜಣ್ಣ, ಗಿರೀಶ್ ಸೇರಿದಂತೆ ಇತರರು ಇದ್ದರು.