ಸಿದ್ದಾಪುರ, ಏ. 21: ಹಾವುಗಳು ರಕ್ಷಣೆ... ಇಲಾಖೆಯ ಹೊಣೆ.... ಅಮ್ಮತ್ತಿ ಹೋಬಳಿ ಅರಣ್ಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹಾವುಗಳು ಮನೆಗಳಲ್ಲಿ, ತೋಟಗಳಲ್ಲಿ ಕಂಡು ಬರುತ್ತಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಹಾವುಗಳನ್ನು ಹಿಡಿದು ರಕ್ಷಿಸಿ ಸಮೀಪದ ರಕ್ಷಿತಾರಣ್ಯಕ್ಕೆ ಬಿಟ್ಟು ಸಂರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದು, ಇನ್ನು ಮುಂದೆ ಅಮ್ಮತ್ತಿ ಶಾಖೆಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಅಪಾಯಕಾರಿ ಹಾವುಗಳು ಕಂಡುಬಂದಲ್ಲಿ ಹಾಗೂ ಯಾವುದೇ ರೀತಿಯ ಅರಣ್ಯ ಅಪರಾಧಗಳು ಕಂಡುಬಂದಲ್ಲಿ ಕೆಳಕಂಡ ದೂರವಾಣಿಗೆ ಸಂಪರ್ಕಿಸಿ ಮಾಹಿತಿ ನೀಡಬೇಕಾಗಿ ಉಪ ವಲಯ ಅರಣ್ಯಾಧಿಕಾರಿ ಶಿವಕುಮಾರ ತಿಳಿಸಿದ್ದಾರೆ. ಸಂಪರ್ಕ ದೂರವಾಣಿ ಸಂಖ್ಯೆಗಳು-8105891951, 7259582538.