ಕೂಡಿಗೆ, ಏ. 21: ಶಿರಂಗಾಲ ಗ್ರಾಮ ಪಂಚಾಯಿತಿಯಲ್ಲಿ ಕೊರೊನಾ ಸೋಂಕು ತಡೆ ಸಂಬಂಧ ಟಾಸ್ಕ್ ಫೆÇೀರ್ಸ್ ಸಭೆಯು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರುಬೆಲ್ಲಾ ಭಾಗವಹಿಸಿ ಕೊರೊನಾ ಸೋಂಕು ನಿವಾರಣಾ ಸಂಬಂಧ ಆರೋಗ್ಯ ಇಲಾಖೆಯ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಜನರಿಗೆ ಸೋಂಕು ಲಕ್ಷಣ ಕಂಡು ಬಂದಲ್ಲಿ ಜಿಲ್ಲಾ ಘಟಕದ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು
ಪಂಚಾಯಿತಿ ಅಬಿವೃದ್ಧಿ ಅಧಿಕಾರಿ ಹರೀಶ್ ಮಾತನಾಡಿ ಹೊರಗಡೆಯಿಂದ ಬಂದ ಜನರನ್ನು ಕಡ್ಡಾಯವಾಗಿ ಗೃಹ ಸಂಪರ್ಕ ತಡೆಮಾಡಲು ಕ್ರಮ ತೆಗೆದುಕೊಂಡಿದ್ದು, ಈ ಬಗ್ಗೆ ಆಶಾ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು. ಜಿಲ್ಲಾಧಿಕಾರಿಗಳ ಆದೇಶದಂತೆ ಜನರಿಗೆ ಸೋಂಕು ಲಕ್ಷಣಗಳು ಕಂಡು ಬಂದರೆ ಮನೆ ಮದ್ದು ಮಾಡದೆ, ಸ್ವಯಂ ಔಷಧಿ ತೆಗೆದು ಕೊಳ್ಳದೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದರು.
ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ರಮೇಶ್, ರಘು ಹಾಗೂ ಸದಸ್ಯೆ ಲಕ್ಷ್ಮೀ ಮತ್ತು ಅಂಗನವಾಡಿ ಆಶಾ ಕಾರ್ಯಕರ್ತರು, ಸ್ಥಳೀಯ ಶಾಲಾ ಮುಖ್ಯೋಪಾಧ್ಯಾಯರು ಹಾಜರಿದ್ದರು.