ನವದೆಹಲಿ, ಏ.22: ದೇಶಾದ್ಯಂತ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವವರಿಗೆ ಇನ್ನು ಮುದೆ ಕಾದಿದೆ ಕಠಿಣ ಶಿಕ್ಷೆ, ಜೊತೆಗೆ ತೆರಬೇಕಾಗಿದೆ ಭಾರೀ ದಂಡ! ಈ ಸಂಬಂಧ ಕೇಂದ್ರ ಸರ್ಕಾರ ಬುಧವಾರ ಸುಗ್ರೀವಾಜ್ಞೆ ಹೊರಡಿಸಿದೆ. ಇಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಮಾಧ್ಯಮಗಳಿಗೆ ಮಾಹಿತಿಯಿತ್ತರು.ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರು ಸಾಂಕ್ರಾಮಿಕ ರೋಗದಿಂದ ದೇಶವನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಅವರ ಮೇಲೆ ಹಲ್ಲೆ ನಡೆಸುವುದು ಮತ್ತು ಕಿರುಕುಳ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದರು. ಇದಕ್ಕಾಗಿ 1987 ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು. ಇದರಲ್ಲಿ ಕೊರೊನಾ ಚಿಕಿತ್ಸಕರಾದ ಸಮರವೀರÀ ವೈದ್ಯರು- ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧದ ಪ್ರಕರಣಗಳ ತನಿಖೆಯನ್ನು 30 ದಿನಗಳ ಒಳಗೆ ಮುಗಿಸÀಬೇಕು. ಒಂದು ವರ್ಷದ ಒಳಗೆ ಅಂತಿಮ ತೀರ್ಮಾನವಾಗಬೇಕು. ಇಂತಹ ಧಾಳಿಗಳಿಗಳಿಗೆ ಮೂರು ತಿಂಗಳಿನಿಂದ ಐದು ವರ್ಷದವರೆಗೆ ಶಿಕ್ಷೆ ವಿಧಿಸಲಾಗುತ್ತದೆ. ಅಲ್ಲದೆ, ರೂ. 50 ಸಾವಿರದಿಂದ ರೂ. 2 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಗಂಭೀರ ಧಾಳಿ ಪ್ರಕರಣಗಳಲ್ಲಿ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ತೀವ್ರ ಗಾಯಗಳಾಗಿರುವ ಪ್ರÀಕರಣಗಳಾದರೆ 6 ತಿಂಗಳಿನಿಂದ 7 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಲು ಅವಕಾಶವಿದೆ. ಜೊತೆಗೆ ರೂ. ಒಂದು ಲಕ್ಷದಿಂದ ರೂ.ಐದು ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ ಎಂದು ಸಚಿವರು ಹೇಳಿದರು. ಈ ಸುಗ್ರೀವಾಜ್ಞೆಗೆ ರಾಷ್ಟ್ರಪತಿಗಳ ಅಂಕಿತ ದೊರೆತ ಕೂಡಲೇ ಇದು ಜಾರಿಗೆ ಬರಲಿದೆ.