ಸುಂಟಿಕೊಪ್ಪ, ಏ. 23: ಸುಂಟಿಕೊಪ್ಪ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಕುಮಾರ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಗೆ ಹೊರ ರೋಗಿಗಳಾಗಿ ಬಂದಿದ್ದ ರೋಗಿಗಳನ್ನು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದರು.
ಒಟ್ಟು 5 ಮಂದಿಯನ್ನು ತಪಾಸಣೆಗೊಳಪಡಿಸಿ ಗಂಟಲು ದ್ರವ ಪರೀಕ್ಷೆ ನಡೆಸಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಪಿ.ಆರ್. ಸುಕುಮಾರ್ ಹಾಗೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಗಮಿಸಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಶಿವಕುಮಾರ್ ಅವರೊಂದಿಗೆ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳ ಕೊರತೆಯಿಂದ ರೋಗಿಗಳು ತೊಂದರೆಗೆ ಒಳಗಾಗುತ್ತಿದ್ದು, ಖಾಲಿಯಿರುವ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವಂತೆ ಮನವಿ ಮಾಡಿದರು.