ಬೆಂಗಳೂರು, ಏ. 23: ತಾಪಮಾನ ಏರಿಕೆಯಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ತಾ. 26ರವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ತಾ. 24ರಂದು (ಇಂದು) ವೇಗವಾದ ಗಾಳಿ ಸಹಿತ ಗುಡುಗು ಸಿಡಿಲು ಹೆಚ್ಚಾಗಿರಲಿದ್ದು, ಮಳೆ ಪ್ರಮಾಣ ಕಡಿಮೆ ಇರಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಶುಷ್ಕ ವಾತಾವರಣ ಇರಲಿದೆ.
ಒಂದು ವಾರದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕನಿಷ್ಟ 35ರಿಂದ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್‍ವರೆಗೆ ತಾಪಮಾನ ಏರಿಕೆ ಕಂಡಿದೆ. ಸುಡುಬಿಸಿಲಿನ ಧಗೆಯ ಜೊತೆಗೆ ರಾತ್ರಿ ವೇಳೆ ಸೆಕೆಯೂ ಹೆಚ್ಚಾಗಿದೆ.