ಮಡಿಕೇರಿ, ಏ. 24 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಾ. 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಕೋವಿಡ್-19 ರ ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಗರದ ಜಿ.ಪಂ. ಸಭಾಂಗಣದಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಪರೀಕ್ಷಾ ಪ್ರಯೋಗಾಲಯ ಕೇಂದ್ರದ ಕಾಮಗಾರಿಯ ಪರಿವೀಕ್ಷಣೆ ನಡೆಸಲಿದ್ದಾರೆ ಎಂದು ವಸತಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್. ರವಿಪ್ರಕಾಶ್ ತಿಳಿಸಿದ್ದಾರೆ.