ಸೋಮವಾರ ಪೇಟೆ, ಏ. 24: ಜಿಲ್ಲೆಯಲ್ಲಿ ಅಗತ್ಯ ಕಾಮಗಾರಿ ಗಳನ್ನು ಕೈ ಗೊಳ್ಳಲು ಸರ್ಕಾರವೇ ಅವಕಾಶ ಕಲ್ಪಿಸಿರುವದರಿಂದ, ಕಾಮಗಾರಿಗೆ ಅಗತ್ಯವಾಗಿರುವ ಸಾಮಗ್ರಿಗಳ ಸೋಮವಾರ ಪೇಟೆ, ಏ. 24: ಜಿಲ್ಲೆಯಲ್ಲಿ ಅಗತ್ಯ ಕಾಮಗಾರಿ ಗಳನ್ನು ಕೈ ಗೊಳ್ಳಲು ಸರ್ಕಾರವೇ ಅವಕಾಶ ಕಲ್ಪಿಸಿರುವದರಿಂದ, ಕಾಮಗಾರಿಗೆ ಅಗತ್ಯವಾಗಿರುವ ಸಾಮಗ್ರಿಗಳ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವರ ವೀಡಿಯೋ ಕಾನ್ಫರೆನ್ಸ್‍ನಲ್ಲಿ ಅಧಿಕಾರಿಗಳೊಂದಿಗೆ ಭಾಗವಹಿಸಿದ್ದ ಶಾಸಕರು, ನಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಈ ಬಗ್ಗೆ ಮನವಿ ಮಾಡಿದರು.ಮಳೆಗಾಲ ಹತ್ತಿರವಾಗುತ್ತಿರುವ ಪ್ರಸ್ತುತ ಸಂದರ್ಭದಲ್ಲಿ, ಕೊಡಗಿನಲ್ಲಿ ರಸ್ತೆ, ಸೇತುವೆ, ಚರಂಡಿ, ಮೋರಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಿರ್ವಹಿಸಲು ಜಿಲ್ಲಾಡಳಿತ ಅನುಮತಿ ನೀಡಿದ್ದರೂ ಸಹ ಕಚ್ಚಾ ಸಾಮಗ್ರಿಗಳನ್ನು ಪೂರೈಕೆ ಮಾಡಲು ಅಸಾಧ್ಯವಾಗಿದೆ. ಜಿಲ್ಲೆಯಲ್ಲಿ ಕ್ರಷರ್‍ಗಳಿಗೆ ಅನುಮತಿ ನೀಡದ ಹಿನ್ನೆಲೆ ಎಂ ಸ್ಯಾಂಡ್, ಜಲ್ಲಿ ಸೇರಿದಂತೆ ಇತರ ಸಾಮಗ್ರಿಗಳ ಕೊರತೆ ಎದುರಾಗಿದ್ದು, ಈ ಹಿನ್ನೆಲೆ ಕೊಡಗಿನಲ್ಲಿ ಕ್ರಷರ್‍ಗಳನ್ನು ಚಾಲನೆ ಮಾಡಲು ಸರ್ಕಾರದ ಮಟ್ಟದಲ್ಲಿ ಅನುಮತಿ ನೀಡಬೇಕೆಂದು ಶಾಸಕ ರಂಜನ್ ಮನವಿ ಮಾಡಿದರು.ಇದರೊಂದಿಗೆ ಜಿಲ್ಲೆಗೆ ಒತ್ತಿಕೊಂಡಂತೆ (ಮೊದಲ ಪುಟದಿಂದ) ಇರುವ ಪಿರಿಯಾಪಟ್ಟಣದಿಂದಲೂ ಎಂ ಸ್ಯಾಂಡ್, ಜಲ್ಲಿಯನ್ನು ಸಾಗಾಟ ಗೊಳಿಸಲು ಅವಕಾಶ ಕಲ್ಪಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಗಮನ ಸೆಳೆದರು.ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯ ಕಾರ್ಯದರ್ಶಿಗಳು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವದಾಗಿ ಭರವಸೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಪೂರ್ಣ ಗೊಳಿಸುವದು ಹಾಗೂ ಮಳೆಗಾಲಕ್ಕೆ ಮುಂಚಿತವಾಗಿ ಕೈಗೊಳ್ಳಬೇಕಾದ ಕಾಮಗಾರಿಗಳನ್ನು ಪ್ರಾರಂಭಿಸಲು ಅನುಕೂಲವಾಗಲಿದೆ ಎಂದು ಶಾಸಕ ರಂಜನ್ ಅವರು ಸುದ್ದಿಗಾರರಿಗೆ ತಿಳಿಸಿದರು.
ವೀಡಿಯೋ ಕಾನ್ಫರೆನ್ಸ್: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಸಚಿವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಸಚಿವರೊಂದಿಗೆ ಮಾತನಾಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಕೊಡಗಿನಲ್ಲಿ ಅತಿಯಾದ ಮಳೆಯಿಂದ ನದಿಪಾತ್ರಗಳಲ್ಲಿ ಹೂಳುತುಂಬಿದ್ದು, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೂಳು ತೆಗೆಯುವ ಕಾಮಗಾರಿ ಕೈಗೊಳ್ಳಲು ಅವಕಾಶವಿದೆಯೇ? ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಕೆ.ಎಸ್. ಈಶ್ವರಪ್ಪ ಅವರು, ನದಿಪಾತ್ರದಲ್ಲಿ ತುಂಬಿರುವ ಹೂಳನ್ನು ತೆಗೆಯಲು ಉದ್ಯೋಗಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಬಹುದಾಗಿದೆ. ಆದ್ಯತೆಯ ಮೇರೆ ಕಾಮಗಾರಿ ಕೈಗೊಳ್ಳುವಂತೆ ತಿಳಿಸಿದರು. ನಂತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತಕ್ಷಣ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಜಲ ಮರುಪೂರಣ ಸೇರಿದಂತೆ ನೀರಾವರಿಗೆ ಸಂಬಂಧಿಸಿದ ಕೆಲಸಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಜನರು ಗುಳೇ ಹೋಗುವದನ್ನು ತಪ್ಪಿಸುವದಕ್ಕಾಗಿ ಕೋವಿಡ್-19 ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕ ಸ್ಥಳೀಯ ಕಾರ್ಮಿಕರನ್ನು ಬಳಸಿಕೊಂಡು ಕೆಲಸ ನಿರ್ವಹಿಸಬೇಕು. ಕಾಮಗಾರಿಯ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಜಿಲ್ಲಾಡಳಿತ ನೀಡಿರುವ ಸೂಚನೆ ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶಾಸಕರು ಸೂಚನೆ ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸುನಿಲ್, ಕೃಷಿ ಇಲಾಖೆಯ ಮುಕುಂದ, ಪಂಚಾಯತ್‍ರಾಜ್ ಇಂಜಿನಿಯರಿಂಗ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಭಿಯಂತರ ಟಿ.ಪಿ. ವೀರೇಂದ್ರ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್‍ಕುಮಾರ್, ಸಿಡಿಪಿಓ ಅಣ್ಣಯ್ಯ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಶೋಭ, ಸಾಮಾಜಿಕ ಅರಣ್ಯ ಇಲಾಖೆಯ ನಮನ್, ಕ್ಷೇತ್ರಶಿಕ್ಷಣಾಧಿಕಾರಿ ಪಾಂಡು, ಶನಿವಾರಸಂತೆ ಆರ್‍ಎಫ್‍ಓ ಕೊಟ್ರೇಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.